ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್

Krishnaveni K

ಗುರುವಾರ, 2 ಮೇ 2024 (13:06 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೊಳಗಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗಕ್ಕೆ ಎಸ್ಐಟಿ ಅಧಿಕಾರಿಗಳು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಸದ್ಯಕ್ಕೆ ಪ್ರಜ್ವಲ್ ಜರ್ಮನಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಒಂದು ವೇಳೆ ಅವರು ವಿಮಾನ ನಿಲ್ದಾಣದಲ್ಲಿ ಕಂಡುಬಂದರೆ ತಕ್ಷಣವೇ ಅವರನ್ನು ವಶಕ್ಕೆ ಪಡೆಯಲು ಸೂಚಿಸಿಲಾಗಿದೆ.

ನಿನ್ನೆಯೇ ಎಸ್ಐಟಿ ತಂಡ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣಗೆ ನೋಟಿಸ್ ನೀಡಿತ್ತು. ಆದರೆ ಇದುವರೆಗೆ ಅವರುವಿದೇಶದಿಂದ ಬಂದಿಲ್ಲ. 24 ಗಂಟೆಯೊಳಗೆ ಎಸ್ಐಟಿ ಮುಂದೆ ಹಾಜರಾಗದಿದ್ದರೆ ತನಿಖಾಧಿಕಾರಿಗಳು ಬಂಧನಕ್ಕೂ ಮುಂದಾಗಲಿದ್ದಾರೆ.

ಪ್ರಕರಣದಲ್ಲಿ ಪ್ರಜ್ವಲ್ ತಂದೆ ಎಚ್ ಡಿ ರೇವಣ್ಣ ಕೂಡಾ ಆರೋಪಿಯಾಗಿದ್ದಾರೆ. ಇದೀಗ ವಿಚಾರಣೆಗೆ ಹಾಜರಾಗದೇ ಇದ್ದರೆ ಪ್ರಜ್ವಲ್ ಜೊತೆಗೆ ರೇವಣ್ಣ ಕೂಡಾ ಅರೆಸ್ಟ್ ಆಗುವ ಸಾಧ‍್ಯತೆಯಿದೆ.  ನಿನ್ನೆಯಷ್ಟೇ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗಲು 7 ದಿನದ ಕಾಲಾವಕಾಶ ಕೇಳಿದ್ದರು. ಆದರೆ ಅದು ಸಾಧ‍್ಯವಿಲ್ಲ ಎಂದು ಗೃಹಸಚಿವ ಜಿ ಪರಮೇಶ್ವರ್ ಹೇಳಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ