ಬ್ರ್ಯಾಂಡ್‌ ಬೆಂಗಳೂರು ಹೆಸರಲ್ಲಿ ಕಾಂಗ್ರೆಸ್‌ನಿಂದ ಲೂಟಿ: ಕುಮಾರಸ್ವಾಮಿ ಆಕ್ರೋಶ

sampriya

ಭಾನುವಾರ, 26 ಮೇ 2024 (15:38 IST)
ಬೆಂಗಳೂರು: ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಲೂಟಿ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತಾಡಿದ ಅವರು, ಇದು ಬ್ರ್ಯಾಂಡ್ ಬೆಂಗಳೂರು ಅಲ್ಲ ಲೂಟಿ ಬೆಂಗಳೂರು ಎಂದು ಆಕ್ರೋಶ ಹೊರಹಾಕಿದರು.

ಇನ್ನೂ ಎರಡು ಮೂರು ಮಳೆಗೇ ಬೆಂಗಳೂರಿನಲ್ಲಿ ಮನೆಗಳಿಗೆ ನೀರು ತುಂಬಿಕೊಂಡಿದೆ. ಬಿಡಿಎನಲ್ಲಿ ಮೊನ್ನೆ ಕ್ಲೋಸ್ಡ್ ಡೋರ್ ಮೀಟಿಂಗ್ ಮಾಡಿದ್ದಾರಂತೆ. ಬಹಳ ರಹಸ್ಯವಾಗಿ ಸಭೆ ಮಾಡಿದ್ದಾರಂತೆ. ಬೆಂಗಳೂರಿಗೆ ಇವರ ಕೊಡುಗೆ ಏನು? ಲೂಟಿ ಅಷ್ಟೇ ಎಂದು ಹೆಸರೇಳದೆ ಕಿಡಿಕಾರಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ