ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಮತ್ತೊಂದು ಲಾರಿ; ಕ್ಲಿನರ್ ಮತ್ತು ಡ್ರೈವರ್ ಇಬ್ಬರ ದುರ್ಮರಣ

ಶನಿವಾರ, 22 ಫೆಬ್ರವರಿ 2020 (06:25 IST)
ರಾಯಚೂರು : ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಕ್ಲಿನರ್ ಮತ್ತು ಡ್ರೈವರ್ ಇಬ್ಬರು ಮೃತಪಟ್ಟ ಘಟನೆ ಸಿಂಧನೂರು ತಾಲೂಕಿನ ಮುಳ್ಳೂರು ಕ್ರಾಸ್ ಬಳಿ ನಡೆದಿದೆ.


ರಾಹುಲ್ ಭಾಸ್ಕರ್(25), ವೈಜನಾಥ್(28) ಮೃತಪಟ್ಟ ವ್ಯಕ್ತಿಗಳು. ಲಾರಿಯೊಂದು ಮುಳ್ಳೂರು ಕ್ರಾಸ್ ಬಳಿ ರಸ್ತೆಯಲ್ಲಿ ಕೆಟ್ಟು ನಿಂತಿತ್ತು. ಆಗ ಕಬ್ಬಿಣದ ಪೈಪ್ ಗಳನ್ನು ತುಂಬಿಕೊಂಡು ಬರುತ್ತಿದ್ದ ಮತ್ತೊಂದು ಲಾರಿ, ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಾಹುಲ್ ಸ್ಥಳದಲ್ಲೆ ಮೃತಪಟ್ಟಿದ್ದು , ಗಂಭೀರವಾಗಿ ಗಾಯಗೊಂಡ ವೈಜನಾಥ್ ನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.


ಈ ಬಗ್ಗೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ