ಕೈತಪ್ಪಿದ ಟಿಕೆಟ್‌: ಬಿಜೆಪಿಗೆ ಗುಡ್‌ಬೈ ಹೇಳಿದ ಸಂಸದ ಬಿ.ಎನ್‌.ಬಚ್ಚೇಗೌಡ

Sampriya

ಗುರುವಾರ, 21 ಮಾರ್ಚ್ 2024 (10:20 IST)
Photo Courtesy Facebook
ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದ ಹಾಗೇ ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿ  ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ವಿಜಯೇಂದ್ರಗೆ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಪತ್ರದಲ್ಲಿ ಸ್ವಇಚ್ಛೆಯಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದು, ಶಾಸಕನಾಗಿ ಸಚಿವನಾಗಿ, ಸಂಸದನಾಗಿ ಕೆಲಸ ಮಾಡಲು ಅವಕಾಶ ನೀಡಿದ ಪಕ್ಷದ ಮುಖಂಡರಿಗೆ ಧನ್ಯವಾದಗಳು ತಿಳಿಸಿದ್ದಾರೆ.  ಇವರಿಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೈತಪ್ಪಿದ್ದು, ಅದರ ಬೆನ್ನಲ್ಲೇ ಈ ನಿರ್ಧಾರವನ್ನು ಕೈಗೊಂಡಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಚ್ಚೇಗೌಡರ ಗೆಲುವಿನ ಮೂಲಕವೇ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು.ಬಚ್ಚೇಗೌಡರ ಪುತ್ರ ಶರತ್‌ ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆಯಾಗಿದ್ದು ಹೊಸಕೋಟೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಬಚ್ಚೇಗೌಡ ಕಾಂಗ್ರೆಸ್‌ನ ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳ ಅಂತರದಿಂದ ಸೋಲಿಸಿದ್ದರು. ಬಚ್ಚೇಗೌಡ ಅವರಿಗೆ 7,45,912 ಮತಗಳು ಬಿದ್ದರೆ ಮೊಯ್ಲಿ ಅವರಿಗೆ 5,63,802 ಮತಗಳು ಬಿದ್ದಿದ್ದವು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ