ಒಂದಂಕಿ ಲಾಟರಿ ಹಗರಣ: ಸಿಬಿಐ ವಿಚಾರಣೆಗೆ ಹಾಜರಾದ ಡಿಜಿಪಿ ಓಂ ಪ್ರಕಾಶ್, ಕೆಂಪಯ್ಯ

ಶುಕ್ರವಾರ, 5 ಆಗಸ್ಟ್ 2016 (10:27 IST)
ರಾಜ್ಯದಲ್ಲಿ ಬಹುಕೋಟಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಡಿಜಿಪಿ ಓಂ ಪ್ರಕಾಶ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರ ಸಲಹೆಗಾರ ಕೆಂಪಯ್ಯ ಅವರು ಸಿಬಿಐ ವಿಚಾರಣೆಗೆ ಹಾಜರಾಗಿದ್ದಾರೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಡಿಜಿಪಿ ಓಂ ಪ್ರಕಾಶ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರ ಸಲಹೆಗಾರ ಕೆಂಪಯ್ಯನವರಿಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳು ನವದೆಹಲಿಯ ಸಿಬಿಐ ಕೇಂದ್ರ ಕಚೇರಿಗೆ ಹಾಜರಾಗಿದ್ದಾರೆ.
 
ರಾಜ್ಯದಲ್ಲಿ ಲಾಟರಿ ನಿಷೇಧವಿದ್ದರೂ ಹೊರ ರಾಜ್ಯಗಳಲ್ಲಿ ಮುದ್ರಿಸಿ ಕರ್ನಾಟಕದಲ್ಲಿ ಅಕ್ರಮವಾಗಿ ಲಾಟರಿ ಮಾರಾಟ ಮಾಡಲಾಗುತ್ತಿತ್ತು. ಈ ಕುರಿತು ಸ್ಥಳೀಯ ಪೊಲೀಸರಿಗೆ ಮಾಹಿತಿ ಇದ್ದರು, ಹಿರಿಯ ಅಧಿಕಾರಿಗಳ ಸೂಚನೆಯಂತೆ ಸುಮ್ಮನಿದ್ದರು. ಇದಕ್ಕಾಗಿ ಪೊಲೀಸ್ ಪೊಲೀಸ್ ಇಲಾಖೆಗೆ ಕಪ್ಪು ಕಾಣಿಕೆ ಸಲ್ಲುತ್ತಿತ್ತು ಎಂದು ಆರೋಪ ಮಾಡಲಾಗಿತ್ತು. 
 
ಬಹುಕೋಟಿ ಒಂದಂಕಿ ಲಾಟರಿ ದಂಧೆ ರೂವಾರಿ ಪಾರಿ ರಾಜನ್ ಜೊತೆ ನಿಕಟ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯಕ್ತರಾದ ಅಲೋಕ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ