ಕಾರ್ಯದರ್ಶಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಕಚೇರಿ ಕೃಷ್ಠಾದಲ್ಲಿ ಭೇಟಿ ಮಾಡಲಿದ್ದು, ಆರೋಪ ಸಂಬಂಧ ವಿಸ್ತೃತವಾಗಿ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ. ಮಾತುಕತೆಯ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೆ ನವದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಪ್ರಕರಣದಲ್ಲಿ ಹೆಚ್ಚುವರಿ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹಾಗೂ ಪೊಲೀಸ್ ಇಲಾಖೆಯ ಕೆಲ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದು, ಒಟ್ಟು 33 ಮಂದಿಯ ಪಟ್ಟಿಯನ್ನು ಸಿಐಡಿ ಅಧಿಕಾರಿಗಳು ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಟ್ನಾಯಕ್ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ ಎನ್ನಲಾಗಿದೆ.