ರಸ್ತೆ ನಡುವೆ ಚಿರತೆಗಳ ಲವ್, ರೋಮ್ಯಾನ್ಸ್
ಕಾಡಿನ ಚಿರತೆಗಳು ನಾಡಿನ ರಸ್ತೆಯಲ್ಲೇ ಲವ್, ರೋಮ್ಯಾನ್ಸ್ ಮಾಡಿ ಗಮನ ಸೆಳೆದಿವೆ.
ಅಮಚವಾಡಿ ಗ್ರಾಮದ ಎಣ್ಣೆಹೊಳೆ ದೇವಸ್ಥಾನದ ಬಳಿ ರಾತ್ರಿ 9 ಗಂಟೆ ಸಮಯದಲ್ಲಿ ಎರಡು ಚಿರತೆಗಳು ರಸ್ತೆಯಲ್ಲಿ ಕಾಣಿಸಿಕೊಂಡಿವೆ. ಇದೇ ವೇಳೆ ಕಾರು ಚಾಲಕ ಚಿರತೆಗಳು ಮಿಲನ ನಡೆಸುತ್ತಿರುವುದನ್ನು ನೋಡಿ ಮುಂದೆ ಸಾಗಲು ಪರದಾಟ ನಡೆಸಿದ್ದಾನೆ. ಬಳಿಕ ತನ್ನ ಮೊಬೈಲ್ನಲ್ಲಿ ಚಿರತೆಗಳ ದೃಶ್ಯವನ್ನು ಸೆರೆ ಹಿಡಿದಿದ್ದಾನೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದ್ದು, ಚಿರತೆಗಳೆರಡರ ಅಪರೂಪದ ದೃಶ್ಯಕಂಡು ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.