ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮೃತಪಟ್ಟರೆ, ಪ್ರಿಯಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆತ್ಮಹತ್ಯೆಗೆ ಯತ್ನಿಸಿದ್ದು, ಸುಧಾ ಚಿಕಿತ್ಸೆ ಫಲಕಾರಿಯದೇ ಮೃತಪಟ್ಟಿದ್ದಾರೆ.