ಗಣಪತಿ ಪ್ರಕರಣ: ಬಿಜೆಪಿಗೆ ಸತ್ಯಾಂಶ ಬೇಕಿಲ್ಲ ಎಂದ ಸಚಿವ ಜಾರ್ಜ್

ಶುಕ್ರವಾರ, 8 ಸೆಪ್ಟಂಬರ್ 2017 (17:24 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಹಿಂದಿರುವ ಸತ್ಯಾಂಶ ಬಿಜೆಪಿಗೆ ಬೇಕಾಗಿಲ್ಲ. ರಾಜಕೀಯ ಕಾರಣಕ್ಕಾಗಿ ರಾಜೀನಾಮೆ ಕೇಳುತ್ತಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿರುಗೇಟು ನೀಡಿದ್ದಾರೆ
ಸುಪ್ರೀಂಕೋರ್ಟ್ ಎಂ.ಕೆ. ಗಣಪತಿ ಪ್ರಕರಣವನ್ನು ಸಿಬಿಐಗೆ ವಹಿಸಿದೆ. ಸಿಬಿಐ ತನಿಖೆಗೆ ಸರಕಾರ ಸಂಪೂರ್ಣ ಸಹಕಾರ ನೀಡಲಿದೆ. ಆದಾಗ್ಯೂ ಬಿಜೆಪಿ ನನ್ನ ರಾಜೀನಾಮೆ ಕೇಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಹಿಂದೆ ಗಣಪತಿ ಆತ್ಮಹತ್ಯೆಯ ಸಿಐಡಿ ತನಿಖೆ ನಡೆಯುತ್ತಿರುವಾಗ, ತನಿಖೆಯ ಮೇಲೆ ಪ್ರಭಾವ ಬೀರದಂತಾಗಲು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಇದೀಗ ಸಿಬಿಐ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಚಿವನಾಗಿ ಸಿಬಿಐ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ಯಾಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಸರಕಾರ ಸಂಪೂರ್ಣ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ತನಿಖೆಗೆ ಸಹಕರಿಸಲು ಸಿದ್ದವಿದೆ ಎಂದು ಈಗಾಗಲೇ ಹೇಳಿದ್ದಾರೆ. ವಿಪಕ್ಷಗಳು ಅನಗತ್ಯವಾಗಿ ರಾಜೀನಾಮೆ ಕೇಳುತ್ತಿವೆ ಎಂದು ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ