ಬೆಂಗಳೂರು : ಮಾ. 1ರಿಂದ ಸರ್ಕಾರಿ ನೌಕರರು ಮುಷ್ಕರ ಆರಂಭಿಸುವುದಾಗಿ ಸರ್ಕಾರಕ್ಕೆ ಎಚ್ಚರ ನೀಡಿದ್ದಾರೆ.
ಸಿಎಂ ಬೊಮ್ಮಾಯಿ ವಿಧಾನಸಭೆಯಲ್ಲಿ ಮಾತನಾಡುತ್ತಾ, ಏಳನೇ ವೇತನ ಆಯೋಗ ನೀಡುವ ಮಧ್ಯಂತರ ವರದಿ ಅನ್ವಯ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡುವುದಾಗಿ ಹೇಳಿದ್ದಾರೆ.
ಮುಖ್ಯಮಂತ್ರಿಗಳು ನೀಡಿದ್ದ ಭರವಸೆಯನ್ನು ಸರ್ಕಾರಿ ನೌಕರರು ನಂಬುವ ಸ್ಥಿತಿಯಲ್ಲಿ ಇಲ್ಲ. ಅಧಿಕೃತ ಆದೇಶಕ್ಕೆ ಪಟ್ಟು ಹಿಡಿದಿರುವ ರಾಜ್ಯ ಸರ್ಕಾರಿ ನೌಕರರ ಸಂಘ ನಿಗದಿಯಂತೆ ಮಾರ್ಚ್ ಒಂದರಿಂದ ಮುಷ್ಕರ ಆರಂಭಿಸಲು ಮುಂದಾಗಿದೆ.
ಇಂದು ಸಭೆ ನಡೆಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದೆ. ನಿಗಮ,ಪ್ರಾಧಿಕಾರ ಸೇರಿ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಲು ಸೂಚನೆ ಕೊಟ್ಟಿದ್ದೇವೆ. ಈಗಾಗಲೇ ಒಂಭತ್ತು ತಿಂಗಳು ತಡವಾಗಿದೆ. ನಮ್ಮ ಬೇಡಿಕೆ ಈಡೇರಲೇ ಬೇಕು.. ಅಲ್ಲಿಯವರೆಗೂ ವಿರಮಿಸಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಸ್ಪಷ್ಟಪಡಿಸಿದೆ.