ಬೆಂಗಳೂರು : ಕೋಟಿ ಕೋಟಿ ಹಣ ಸಂಗ್ರಹಿಸಿ ಭ್ರಷ್ಟಾಚಾರದ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ವಕೀಲರ ಮೂಲಕ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿ ಇಂದೇ ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ.
ಇಂದು ವಿಚಾರಣೆ ನಡೆಸಲು ನಿರಾಕರಿಸಿದ ನ್ಯಾಯಮೂರ್ತಿ ನಟರಾಜನ್, ತುರ್ತು ವಿಚಾರಣೆಯ ಅಗತ್ಯವೇನಿದೆ? ನಾಳೆ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. ಹೈಕೋರ್ಟ್ ನಾಳೆ ವಿಚಾರಣೆ ನಡೆಯಲಿದೆ.
ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುತ್ತಿದ್ದಂತೆ ಎಚ್ಚೆತ್ತ ಲೋಕಾಯುಕ್ತ, ಎ1 ಆರೋಪಿ ವಿರೂಪಾಕ್ಷಪ್ಪರಿಗೆ ಲುಕೌಟ್ ನೋಟಿಸ್ ಜಾರಿಗೆ ನಿರ್ಧರಿಸಿದೆ. ನೋಟಿಸ್ ನೀಡಿಯೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಲುಕೌಟ್ ನೋಟಿಸ್ ಜಾರಿ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.