ಮಧ್ಯಪ್ರದೇಶದಲ್ಲಿ ಪೊಲೀಸರ ಗೋಲಿಬಾರ್: ಕಾಂಗ್ರೆಸ್ ಪ್ರತಿಭಟನೆ

ಶುಕ್ರವಾರ, 9 ಜೂನ್ 2017 (13:48 IST)
ಮಧ್ಯಪ್ರದೇಶದ ಮಂಡ್ಸೌರ್‌ ಜಿಲ್ಲೆಯಲ್ಲಿ ರೈತರ ಮೇಲೆ ಪೊಲೀಸರು ನಡೆಸಿದ ಗೋಲಿಬಾರ್‌ ವಿರೋಧಿಸಿ ಕಾಂಗ್ರೆಸ್ ಪಕ್ಷ ನಗರದಲ್ಲಿ ಪ್ರತಿಭಟನೆ ಆರಂಭಿಸಿದೆ.
 
ನಗರದ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ವ್ಯಕ್ತಪಡಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ವಿರುದ್ಧ ಘೋಷಣೆಗಳನ್ನು ಕೂಗಿದರು.
 
ರೈತರ ಸಾಲ ಮನ್ನಾ ಮತ್ತು ಈರುಳ್ಳಿಗೆ ಬೆಂಬಲ ಬೆಲೆ ನೀಡುವಂತೆ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರೂ ಪೊಲೀಸರು ರೈತರ ಮೇಲೆ ದೌರ್ಜನ್ಯವೆಸಗಿ ಗೋಲಿಬಾರ್ ಮಾಡಿದ್ದಾರೆ. ಗೋಲಿಬಾರ್‌ನಲ್ಲಿ ಆರು ಮಂದಿ ರೈತರನ್ನು ಹತ್ಯೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ರೈತರ ಹೋರಾಟವನ್ನು ಬೆಂಬಲಿಸಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮಧ್ಯಪ್ರದೇಶಕ್ಕೆ ತೆರಳಿದ್ದಾಗ ಅವರನ್ನು ಅನಗತ್ಯವಾಗಿ ಬಂಧಿಸಲಾಗಿದೆ. ಮಧ್ಯಪ್ರದೇಶದಲ್ಲಿರುವ ಬಿಜೆಪಿ ಸರಕಾರ ರೈತ ವಿರೋಧಿ ಸರಕಾರವಾಗಿದೆ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ