ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಪಂದ್ಯವಾವಳಿ ನಡೆಯಲಿದ್ದು, ವಿಜೇತ ತಂಡಕ್ಕೆ 1 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 50 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದೆಂದರು.
ಜ.4 ರಂದು ಸಂಜೆ 7 ಗಂಟೆಗೆ ನಗರದ ಲೀ ಕೂರ್ಗ್ ಸಭಾಂಗಣದಲ್ಲಿ ಪಂದ್ಯಾವಳಿಯ ಬಿಡ್ಡಿಂಗ್ ಪ್ರಕ್ರಿಯೆ ನಡೆಯಲಿದ್ದು, 10 ತಂಡದ ಮಾಲಕರು ಸಜ್ಜಾಗಿದ್ದಾರೆ. ಈ ಬಾರಿ ಪಂದ್ಯಾವಳಿಯನ್ನು ಯ್ಯೂ ಟ್ಯೂಬ್‌ನಲ್ಲಿ ನೇರ ಪ್ರಸಾರ ಮಾಡಲಾಗುವುದೆಂದು ಕಬೀರ್ ಮಾಹಿತಿ ನೀಡಿದರು.