ರವಿ ಹತ್ಯೆ: ಇದೊಂದು ಪೂರ್ವಯೋಜಿತ ಕೊಲೆ ಎಂದ ಪ್ರತಾಪ್ ಸಿಂಹ
ಶನಿವಾರ, 5 ನವೆಂಬರ್ 2016 (15:28 IST)
ಬಿಜೆಪಿ ಮುಖಂಡ ಮಾಗಳಿ ರವಿಯದ್ದು ಅಪಘಾತವಲ್ಲ ಇದೊಂದು ಪೂರ್ವಯೋಜಿತ ಕೊಲೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ.
ಒಂದು ವೇಳೆ, ಅಪಘಾತವಾಗಿದ್ದಲ್ಲಿ ವಾಹನ ಜಖಂ ಆಗುತ್ತಿತ್ತು. ರವಿ ಮೇಲೆ ಹಲ್ಲೆ ನಡೆದ ಬಳಿಕ ವಾಹನದಿಂದ ಕೆಳಗೆ ಬಿದ್ದಿದ್ದಾರೆ. ಇದೊಂದು ಪೂರ್ವಯೋಜಿತ ಕೊಲೆ ಎನ್ನುವುದು ಸ್ಪಷ್ಟವಾಗುತ್ತದೆ ಎಂದರು.
ಟಪ್ಪು ಜಯಂತಿ ಮುಗಿದ ತಕ್ಷಣ ರವಿ ಸಾವನ್ನಪ್ಪಿದ್ದಾರೆ. ಇದೊಂದು ಕೊಲೆ ಅನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ರವಿ ಕುಟುಂಬಕ್ಕೆ ಸರಕಾರ ಪರಿಹಾರ ಕೊಡಬೇಕು. ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಒಂದು ವೇಳೆ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದಲ್ಲಿ ಬಂದ್ ಕರೆ ನೀಡಲಾಗುವುದು ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸೋಮುವಾರದಂದು ಪಿರಿಯಾಪಟ್ಟಣ, ಕೆ.ಆರ್ ನಗರ್ ಹುಣಸೂರು, ಹೊಸಕೋಟೆ ತಾಲೂಕುಗಳನ್ನು ಬಂದ್ ಮಾಡಲಾಗುವುದು ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಆರೆಸ್ಸೆಸ್ ಮುಖಂಡ ರುದ್ರೇಶ್ ಹತ್ಯೆಯ ನೆನಪು ಮಾಸುವ ಮುನ್ನವೇ ಮತ್ತೊಬ್ಬ ಬಿಜೆಪಿ ಕಾರ್ಯಕರ್ತನ ಕೊಲೆಯಾಗಿರುವುದು ಆತಂಕ ಮೂಡಿಸಿಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ ಎನ್ನುವ ಅನುಮಾನ ಕಾಡುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ