ಮಡಿಕೇರಿ ಘರ್ಷಣೆ: ನ್ಯಾಯಾಂಗ ತನಿಖೆಗೆ ಹಿಂದೂ ಸಂಘಟನೆಗಳ ಒತ್ತಾಯ

ಶುಕ್ರವಾರ, 13 ನವೆಂಬರ್ 2015 (15:33 IST)
ಮಡಿಕೇರಿ ಘರ್ಷಣೆಯ ಬಗ್ಗೆ ಸತ್ಯಾಸತ್ಯತೆ ಬಹಿರಂಗವಾಗಲು ನ್ಯಾಯಾಂಗ ತನಿಖೆಗೆ ರಾಜ್ಯ ಸರಕಾರ ಆದೇಶಿಸಬೇಕು  ಎಂದು ಹಿಂದೂ ಸಂಘಟನೆಗಳ ಒತ್ತಾಯಿಸಿವೆ.
 
ಮಡಿಕೇರಿಯಲ್ಲಿ ನಡೆದ ಘರ್ಷಣೆ ಸಂದರ್ಭದಲ್ಲಿ ಹಲವಾರು ಜನರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಎರಡು ಜೀವಗಳು ಬಲಿಯಾಗಿವೆ. ನ್ಯಾಯಾಂಗ ತನಿಖೆಗೆ ಆದೇಶಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹಿಂದೂ ಸಂಘಟನೆಗಳ ಮುಖಂಡರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
 
ವಿಎಚ್‌ಪಿ ಸಂಘಟನೆಗಳು ಮೈಸೂರು, ಬೆಂಗಳೂರು, ಕೋಲಾರ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಮುಂದುವರಿಸಿವೆ. ಮಡಿಕೇರಿ ಘಟನೆ ವಿರೋಧಿಸಿ ಹೈದ್ರಾಬಾದ್‌ನಲ್ಲೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಂಗ ತನಿಖೆಯನ್ನು ತಳ್ಳಿಹಾಕಿದ್ದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ತಪ್ಪಿತಸ್ಥರನ್ನು ಶಿಕ್ಷಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. 
 

ವೆಬ್ದುನಿಯಾವನ್ನು ಓದಿ