ಮಹದಾಯಿ ಸಭೆ ರದ್ದು: ಬಿಜೆಪಿ ನಾಯಕರ ಕೈವಾಡ ಎಂದ ಜೆಡಿಎಸ್ ಶಾಸಕ ಕೋನರೆಡ್ಡಿ
ಗುರುವಾರ, 20 ಅಕ್ಟೋಬರ್ 2016 (20:30 IST)
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಕರೆದಿದ್ದ ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆ ರದ್ದಾಗಿದ್ದು, ಉತ್ತರ ಕರ್ನಾಟಕ ಭಾಗದ ಎಲ್ಲಾ ಹೋರಾಟಗಾರರಿಗೆ ತೀವ್ರ ನಿರಾಶೆಯಾಗಿದೆ.
ಮಹದಾಯಿ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ರಾಜಕೀಯ ಮಾಡಬಾರದು ಎಂದು ಜೆಡಿಎಸ್ ಶಾಸಕ ಎನ್.ಎಚ್.ಕೋನರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ನಾಯಕರು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಜೊತೆ ಮಾತುಕತೆ ನಡೆಸಿದ ಮಾತುಕತೆಯನ್ನು ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.
ಕೇಂದ್ರ ಸಚಿವ ಅನಂತ್‌ಕುಮಾರ್, ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹಾಗೂ ಸಂಸದ ಪ್ರಹ್ಲಾದ್ ಜೋಷಿ ಅವರು ಮಹಾರಾಷ್ಟ್ರ ಸಿಎಂ ಜೊತೆ ಮಾತನಾಡಿ ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆ ಮುಂದೂಡಿದ್ದಾರೆ ಎನ್ನುವ ಸಂಶಯ ಕಾಡುತ್ತಿದೆ ಎಂದು ಜೆಡಿಎಸ್ ಶಾಸಕ ಎನ್.ಎಚ್.ಕೋನರೆಡ್ಡಿ ಆರೋಪಿಸಿದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ