ಮಹದಾಯಿ ವಿವಾದ: ಪಿಎಂ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಗುರುವಾರ, 4 ಆಗಸ್ಟ್ 2016 (18:00 IST)
ಮಹದಾಯಿ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮ್ಯನವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ ಕರೆದು ವಿವಾದವನ್ನು ಇತ್ಯರ್ಥಗೊಳಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಇರುವುದರಿಂದ ನ್ಯಾಯಾಧೀಕರಣದ ತೀರ್ಪು ವಿರೋಧಿಸಿ ಧಾರವಾಡ, ಬೆಳಗಾವಿ, ಗದಗ ಹಾಗೂ ಬಾಗಲಕೋಟೆ ಭಾಗದ ಜನರು ಪ್ರತಿಭಟನೆ ಕೈಗೊಂಡಿದ್ದಾರೆ. ಉತ್ತರ ಕರ್ನಾಟಕದ ರೈತರ ಜೀವಾಳವಾಗಿರುವ ಮಲಪ್ರಭ ಡ್ಯಾಂ ತುಂಬಲು ನೀರಿನ ಅವಶ್ಯಕತೆಯಿದೆ ಎಂದು ತಿಳಿಸಿದ್ದಾರೆ.
ಮಹದಾಯಿ ವಿವಾದ ಕುರಿತು ರೈತರು ದಂಗೆ ಎದಿದ್ದಾರೆ. ಮಾತುಕತೆ ಮೂಲಕ ವಿವಾದ ಇತ್ಯರ್ಥಗೊಳಿಸಲು ಗೋವಾ ಮುಖ್ಯಮಂತ್ರಿ ಒಪ್ಪುತ್ತಿಲ್ಲ. ಹೀಗಾಗಿ ತಾವು ಮಧ್ಯಸ್ಥಿಕೆ ವಹಿಸಿ ಸಮಸ್ಯಯನ್ನು ಇತ್ಯರ್ಥಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.