ಮಹಾದಾಯಿ ತೀರ್ಪು: ರೈತ ಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್‌

ಬುಧವಾರ, 27 ಜುಲೈ 2016 (18:46 IST)
ಮಹದಾಯಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಹದಾಯಿ ಟ್ರಿಬ್ಯುನಲ್ ರಾಜ್ಯದ ವಿರುದ್ಧ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ನಮಗೆ ಅನ್ಯಾಯವಾಗಿದೆ ಎಂದು ಕಳಸಾ ಬಂಡೂರಿ ಸಮನ್ವಯ ಸಮಿತಿ ಮತ್ತು ಕನ್ನಡ ಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ.
 
ಕುಡಿಯುವ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಮಹದಾಯಿ ಟ್ರಿಬ್ಯುನಲ್ ನೀಡಿರುವ ತೀರ್ಪು ನಮಗೆ ಬೇಸರ ತಂದಿದೆ ಎಂದು ಕಳಸಾ ಬಂಡೂರಿ ಹಾಗೂ ಮಹದಾಯಿ ಹೋರಾಟಗಾರರು ತಿಳಿಸಿದ್ದಾರೆ.
 
ಮಹದಾಯಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯಯಾಗಿರುವುದನ್ನು ಖಂಡಿಸಿ ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಿರುವುದಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಬೆಂಬಲ್ ವ್ಯಕ್ತಪಡಿಸಿದ್ದಾರೆ.
 
ಮಹದಾಯಿ ಟ್ರಿಬುನಲ್ ತೀರ್ಪಿನ ವಿರುದ್ಧ ಭುಗಿಲ್ಲೆದ್ದ ಆಕ್ರೋಶ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕು ದಿಢೀರ್ ಬಂದ್‌ಗೆ ಕರೆ ನೀಡಲಾಗಿದೆ. ತಾಲೂಕಿನ ಜನರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಂಚಿ ಬಂದ್‌ಗೆ ಬೆಂಬಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನವಲಗುಂದ ತಾಲೂಕು ಸಂಪೂರ್ಣ ಸ್ಥಬ್ಧವಾಗಿದೆ. ಹಾಗೂ ನಾಳೆ ಗದಗ್ ಜಿಲ್ಲೆಯ ಗಜೇಂದ್ರಗಡ ಪಟ್ಟಣವನ್ನು ಬಂದ್ ಮಾಡಲು ಹೋರಾಟಗಾರರು ಕರೆ ನೀಡಿದ್ದಾರೆ.
 
ಮಹದಾಯಿ ನದಿ ನೀರು ಹಂಚಿಕೆ ವಿವಾದದಲ್ಲಿ ರಾಜ್ಯದ ವಿರುದ್ಧ ಹುಬ್ಬಳ್ಳಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಹದಾಯಿ ಹೋರಾಟಗಾರರು ಹಾಗೂ ಕನ್ನಡಪರ ಸಂಘಟನೆಗಳು ಬೃಹತ್ ಪ್ರತಿಭಟನೆ ಕೈಗೊಂಡಿದ್ದು, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ