ಮಹದಾಯಿ ವಿವಾದ: ಅ.19 ರಂದು ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ
ಬುಧವಾರ, 12 ಅಕ್ಟೋಬರ್ 2016 (11:58 IST)
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 21 ರಂದು ಮುಂಬೈನಲ್ಲಿ ಸಭೆ ಕರೆದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಕ್ಟೋಬರ್ 19 ರಂದು ಸರ್ವಪಕ್ಷ ಸಭೆ ಕರೆಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಕರ್ನಾಟಕ ಪ್ರತಿನಿಧಿಗಳ ಸಭೆ ಕರೆಯಲಾಗುತ್ತಿದ್ದು, ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 21 ರಂದು ಮುಂಬೈನಲ್ಲಿ ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಸಭೆ ಕರೆದು ಎಲ್ಲಾ ನಾಯಕರ ಸಲಹೆಗಳನ್ನು ಆಲಿಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ