ಸಚಿವ ಕಾಗೋಡು ತಿಮ್ಮಪ್ಪ ಕಾರಿಗೆ ಕರವೇ ಕಾರ್ಯಕರ್ತರು ಮುತ್ತಿಗೆ

ಶುಕ್ರವಾರ, 29 ಜುಲೈ 2016 (18:19 IST)
ಮಹದಾಯಿ ನ್ಯಾಯಾಧೀಕರಣದ ತೀರ್ಪು ಖಂಡಿಸಿ ಕಳೆದು ಎರಡು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಇಂದು ಯಾದಗಿರಿ ನಗರಕ್ಕೆ ಆಗಮಿಸಿದ್ದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಕಾರಿಗೆ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
 
ಮಹದಾಯಿ ನ್ಯಾಯಾಧೀಕರಣದ ತೀರ್ಪು ಖಂಡಿಸಿ ನಿನ್ನೆಯಿಂದ ರೈತ ಪರ ಸಂಘಟನೆಗಳು ಹಾಗೂ ಕನ್ನಡ ಪರ ಸಂಘಟನೆಗಳು ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಪ್ರತಿಭಟನೆ ನಡೆಸುತ್ತಿವೆ. ಇಂದು ಪ್ರಗತಿ ಪರಿಶೀಲನಾ ಸಭೆ ನಿಮಿತ್ತ ನಗರಕ್ಕೆ ಆಗಮಿಸಿದ್ದ ಕಂದಾಯ ಸಚಿವರಿಗೆ ಪ್ರತಿಭಟನಾ ನಿರತ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಮತ್ತಿಗೆ ಹಾಕಿದ್ದಾರೆ ಎನ್ನಲಾಗಿದೆ.
 
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ನಿಯೋಗದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕು. ಹೋರಾಟದಲ್ಲಿ ಭಾಗಿಯಾಗಿದ್ದ ರೈತರ ಮೇಲೆ ಯಾವುದೇ ಪ್ರಕರಣವನ್ನು ದಾಖಲಿಸದಂತೆ ಹಾಗೂ ಅವರನ್ನು ಬಿಡುಗಡೆ ಮಾಡುವಂತೆ ಹೋರಾಟಗಾರರು ಆಗ್ರಹಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ