ಬೆಳಗಾವಿ : ಡಿಸೆಂಬರ್ ಒಳಗಾಗಿ ಮಹದಾಯಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಮಹದಾಯಿ ಯೋಜನೆ ಜಾರಿಗೆ ತಯಾರಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ನಮಗೆ ಕೇಂದ್ರದಿಂದ ಅನುಮತಿ ಸಿಗುವ ವಿಶ್ವಾಸವಿದೆ. ನಮ್ಮ ಅಧಿಕಾರಿಗಳು ಕೂಡ ಯೋಜನೆ ಜಾರಿಗಾಗಿ ಕಾರ್ಯಪ್ರವೃತರಾಗಿದ್ದಾರೆ.
ನಮ್ಮ ಸರ್ಕಾರ ಎಲ್ಲ ನೀರಾವರಿ ಯೋಜನೆ ಜಾರಿಗೆ ಪ್ರಯತ್ನ ಮಾಡುತ್ತಿದೆ. ಮೇಕೆದಾಟು, ಭದ್ರಾ, ಕೃಷ್ಣಾದಲ್ಲಿ ನಮಗೆ ಹಂಚಿಕೆಯಾದ ನೀರು ಬಳಕೆಗೆ ಅವಕಾಶ ಕೋರಿದ್ದೇವೆ ಎಂದು ವಿವರಿಸಿದರು.
ಮಹದಾಯಿ ಯೋಜನೆ ಜನರಿಗಾಗಿ ಕಾಂಗ್ರೆಸ್ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳಾಗಿದ್ದು, ಕಾಂಗ್ರೆಸ್ಸಿಗರ ಸಾಧನೆ ಏನೆಂಬುದನ್ನು ಹೇಳಲಿ. ಡಿಸೆಂಬರ್ ಒಳಗಾಗಿ ಮಹದಾಯಿ ಯೋಜನೆಗೆ ಚಾಲನೆ ಸಿಗಲಿದೆ. ಅಂತಾರಾಜ್ಯ, ಜಲವ್ಯಾಜ್ಯಗಳಿರುವ ಕಾರಣ ಸೂಕ್ಷ್ಮತೆ ಇರಬೇಕು ಎಂದು ಹೇಳಿದರು.
ಸುಪ್ರೀಂಕೋರ್ಟ್ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.