ಬೆಳ್ತಂಗಡಿ : ಸೌಜನ್ಯ ಪರ ಹೋರಾಟದಲ್ಲಿ ಸದ್ದು ಮಾಡಿರುವ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಜಿಲ್ಲೆಯಿಂದಲೇ ಒಂದು ವರ್ಷ ಗಡಿಪಾರು ಮಾಡಿ ಆದೇಶಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಸೆ.18ರಂದು ಆದೇಶಿಸಲಾಗಿದೆ.
ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣ ವಿವಿಧ ಠಾಣೆಗಳಲ್ಲಿ ದಾಖಲಾಗಿದೆ
ಪುತ್ತೂರು ಸಹಾಯಕ ಆಯುಕ್ತರಾದ(ಎಸಿ) ಸ್ಟೆಲ್ಲಾ ವರ್ಗಿಸ್ ಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18 ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಮಾಡಿ ಆದೇಶ ಮಾಡಲಾಗಿದೆ.
ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.