ಕೆಪಿಎನ್‌ ಟ್ರಾವೆಲ್ಸ್‌ ಬೆಂಕಿಗಾಹುತಿ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್

ಶನಿವಾರ, 17 ಸೆಪ್ಟಂಬರ್ 2016 (11:11 IST)
ಕಾವೇರಿ ಗಲಾಟೆಯಲ್ಲಿ ಕೆಪಿಎನ್ ಟ್ರಾವೆಲ್ಸ್‌ಗೆ ಸೇರಿದ್ದ ಬಸ್‌ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಮೇಜರ್ ಟ್ವೀಸ್ಟ್ ದೊರೆತಿದ್ದು, ಕೆಪಿಎನ್ ಟ್ರಾವೆಲ್ಸ್‌ ಸಿಬ್ಬಂದಿಯ ಬಸ್‌ಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಅನುಮಾನ ಶುರುವಾಗಿದೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎನ್ ಚಾಲಕ ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ದೊರೆತಿದ್ದು, ಇದೀಗ ಬಸ್‌ಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. 
 
ಕಾವೇರಿ ನದಿಯಿಂದ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ಗಲಭೆ ಸಂದರ್ಭದಲ್ಲಿ ಕೆಪಿಎನ್ ಟ್ರಾವೆಲ್ಸ್‌ಗೆ ಸೇರಿದ್ದ 40 ಬಸ್‌ಗಳಿಗೆ ಬೆಂಕಿ ಹಚ್ಚಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಪೀಣ್ಯ ಗಾರ್ಮೆಂಟ್ಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಸತೀಶ್, ರಕ್ಷಿತ್, ಪ್ರಕಾಶ್, ಕೆಂಪೆಗೌಡ, ಲೋಕೇಶ್ ಹಾಗೂ ಚಂದನ್ ಎನ್ನುವ ಆರೋಪಿಗಳನ್ನು ಬಂಧಿಸಲಾಗಿತ್ತು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ