ಮನೋಜ್ (20) ಹಾಗೂ ರಕ್ಷಿತಾ (17) ಮೃತರು.
ಟಿಕ್ ಟಾಕ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧಿಯಾಗಿದ್ದ ರಕ್ಷಿತಾ (17) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಬೆಂಗಳೂರಿನ ಚಿಕ್ಕಸಂದ್ರದ ವರಮಹಾಲಕ್ಷ್ಮಿ ಮತ್ತು ಕೃಷ್ಣಪ್ಪನವರ ಪುತ್ರಿ ಮೃತ ರಕ್ಷಿತ ಪ್ರತಿಷ್ಠಿತ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆಯ ಟಿಕ್ ಟಾಕ್ ವಿಡಿಯೋಗಳು ಸಖತ್ ವೈರಲ್ ಆಗಿದ್ದವು. ಅಪ್ಪ-ಅಮ್ಮ ಮದುವೆಗೆಂದು ತೆರಳಿದ್ದಾಗ ಈಕೆ ಮನೆಯಲ್ಲಿ ನೇಣಿಗೆ ಶರಣಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.