ಶಾಲೆಯ ಬೋಧಕರು ಮತ್ತು ವಿದ್ಯಾರ್ಥಿನಿಯರು ಇದರಲ್ಲಿ ಪಾಲ್ಗೊಂಡು, ರೋಬೋದ ಕಾರ್ಯಕ್ಷಮತೆಗೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ಅವರು `ರೋಬೊಗೆ ಹಲವು ಪ್ರಶ್ನೆಗಳನ್ನು ಕೇಳಿದರು; ಹಾಗೆಯೇ, ಅದು ನೀಡಿದ ಉತ್ತರ ಮತ್ತು ನೆರವನ್ನು ಕಂಡು ಬೆರಗಾದರು.
ನಂತರ ಮಾತನಾಡಿದ ಅಶ್ವತ್ಥನಾರಾಯಣ ಅವರು, `ಇದು ಪ್ರಾಯೋಗಿಕ ಕಾರ್ಯಕ್ರಮವಾಗಿದ್ದು, ರೋಬೋದ ಕಾರ್ಯ ಸಾಮರ್ಥ್ಯವನ್ನು ವೀಕ್ಷಿಸಲಾಗಿದೆ. ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆಯ ಸಲುವಾಗಿ, ಇಂತಹ ರೋಬೋ ಗಳು ಇದ್ದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.
21ನೇ ಶತಮಾನವು ತಂತ್ರಜ್ಞಾನದ ಯುಗವಾಗಿದ್ದು, ಬೋಧನೆಯಲ್ಲಿ ಇದರ ಅಳವಡಿಕೆ ಅಗತ್ಯವಾಗಿದೆ. ಇದರಿಂದಾಗಿ, ಸರಕಾರಿ ಶಾಲಾಕಾಲೇಜುಗಳು ಕೂಡ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆಯಿಲ್ಲದಂತೆ ವಿದ್ಯಾರ್ಥಿಗಳನ್ನು ಆಕರ್ಷಿಸಬಹುದು. ಇದರಿಂದ ಬಡಕುಟುಂಬಗಳ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ನುಡಿದರು.
ಇಂಡಸ್ ಟ್ರಸ್ಟ್ ನ ಸ್ಥಾಪಕ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಲೆ.ಜನರಲ್ ಅರ್ಜುನ್ ರಾಯ್, ಮಲ್ಲೇಶ್ವರ ಬಿಇಒ ಉಮಾದೇವಿ, ಕಾಲೇಜಿನ ಪ್ರಾಂಶುಪಾಲರಾದ ಡಾ.ರವಿ, ಶಾಲೆ ಉಪ ಪ್ರಾಂಶುಪಾಲ ರವಿಕುಮಾರ್ ಈ ಸಂದರ್ಭದಲ್ಲಿ ಇದ್ದರು.