ಮಲ್ಲಿಕಾರ್ಜುನ ಖರ್ಗೆಗೆ ನಿಜಕ್ಕೂ ಆಗಿದ್ದೇನು, ಪುತ್ರ ಪ್ರಿಯಾಂಕ್ ಖರ್ಗೆ ಕೊಟ್ರು ಅಪ್ ಡೇಟ್

Krishnaveni K

ಬುಧವಾರ, 1 ಅಕ್ಟೋಬರ್ 2025 (14:17 IST)
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ದಿಡೀರ್ ಆಗಿ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ನಿಜಕ್ಕೂ ಏನಾಗಿದೆ ಎಂಬುದನ್ನು ಸ್ವತಃ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ನಿನ್ನೆಯವರೆಗೂ ಚೆನ್ನಾಗಿಯೇ ಎಂದಿನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಇಂದು ಅವರು ದಿಡೀರ್ ಆಸ್ಪತ್ರೆಗೆ ದಾಖಲಾದಾಗ ಎಲ್ಲರಿಗೂ ಆತಂಕವಾಗಿತ್ತು. ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಹಬ್ಬಿತ್ತು.

ಆದರೆ ಈಗ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದು, ಪೇಸ್ ಮೇಕರ್ ಅಳವಡಿಸುವ ಸಲುವಾಗಿ ಖರ್ಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರೀಗ ಆರೋಗ್ಯವಾಗಿದ್ದಾರೆ. ನಿಮ್ಮೆಲ್ಲಾ ಹಾರೈಕೆಗಳಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ