ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್, ಕೇಂದ್ರ ಸಂಸದೀಯ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ರಾಜಕೀಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮಾರ್ಗವನ್ನು ಅನುಸುರಿಸುತ್ತಾ ಬಂದವರು. ನಾವು ಸಹ ರಾಜಕೀಯದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಅನುಸರಿಸುತ್ತಾ ಬಂದಿದ್ದೇವೆ ಎಂದು ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಯಾವತ್ತೋ ರಾಜ್ಯದ ಮುಖ್ಯಮಂತ್ರಿಯಾಗಬೇಕಿತ್ತು. ಅವರಿಗೆ ರಾಜ್ಯದ ಮುಖ್ಯಮಂತ್ರಿಯಾಗಲು ಹಲವು ಅವಕಾಶಗಳು ಬಂದಿದ್ದು, ಕೈತಪ್ಪಿ ಹೋಗಿದೆ. ಆದರೆ, ಅವರು ಎಂದು ಬೇಸರ ಮಾಡಿಕೊಳ್ಳಲಿಲ್ಲ. ಬದಲಾಗಿ ಅವರಿಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿದ್ದಾರೆ ಎಂದು ತಿಳಿಸಿದರು.