ಎಸ್ ಸಿಎಸ್ ಟಿ ಹಣ ಮೋದಿ ಕಿತ್ತುಕೊಂಡಿದ್ದಾರೆ ಎಂದ ಮಲ್ಲಿಕಾರ್ಜುನ ಖರ್ಗೆ: ರಾಜ್ಯದಲ್ಲಿ ಆಗ್ತಿರೋದು ಏನು ಎಂದ ನೆಟ್ಟಿಗರು

Krishnaveni K

ಬುಧವಾರ, 26 ಫೆಬ್ರವರಿ 2025 (10:47 IST)
ಬೆಂಗಳೂರು: ಎಸ್ ಸಿಎಸ್ ಟಿ, ಅಲ್ಪ ಸಂಖ್ಯಾತರ ಸ್ಕಾಲರ್ ಶಿಪ್ ಹಣವನ್ನು ಮೋದಿ ಸರ್ಕಾರ ಕಿತ್ತುಕೊಂಡಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ನೀವು ಮಾಡ್ತಿರೋದು ಏನು ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

ಒಂದೆಡೆ ಕೇಂದ್ರ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಪರಿಶಿಷ್ಟ ಜಾತಿ/ಪಂಗಡದವರ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಆರೋಪಿಸುತ್ತಿದ್ದಾರೆ. ಇನ್ನೊಂದೆಡೆ ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಿದರೆ ತಪ್ಪೇನು ಎಂದು ಸ್ವತಃ ಅದೇ ಕಾಂಗ್ರೆಸ್ ಪಕ್ಷದ ನಾಯಕ, ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಹಾಗಿದ್ದರೆ ಕೇಂದ್ರಕ್ಕೊಂದು ನ್ಯಾಯ, ರಾಜ್ಯಕ್ಕೆ ಒಂದು ನ್ಯಾಯವೇ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಖರ್ಗೆಯವರೇ ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದಲ್ಲೂ ಪರಿಶಿಷ್ಟರ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗುತ್ತಿದೆ. ಇದನ್ನು ನಿಮ್ಮದೇ ಸಚಿವರು ಸಮರ್ಥಿಸಿಕೊಂಡಿದ್ದಾರೆ.

ಹಾಗಿದ್ದರೆ ಕೇಂದ್ರ ಬಳಸಿದರೆ ತಪ್ಪೇನು ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿದ್ದಾರೆ. ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ, ಅಲ್ಪ ಸಂಖ್ಯಾತರಿಗೆ ನೀಡುವ ಸ್ಕಾಲರ್ ಶಿಪ್ ಹಣವನ್ನು ಕಡಿತಗೊಳಿಸಿದೆ ಎಂದು ಖರ್ಗೆ ಆರೋಪಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ