Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

Krishnaveni K

ಬುಧವಾರ, 16 ಏಪ್ರಿಲ್ 2025 (21:15 IST)
ಕಲಬುರಗಿ: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಿಜೆಪಿ ಹುನ್ನಾರ ನಡೆಸಿದೆ ಎಚ್ಚರಿಕೆಯಿಂದಿರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

ಇಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಖರ್ಗೆ, ರಾಜ್ಯದ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಇತ್ತೀಚೆಗಿನ ರಾಜಕೀಯ ಬೆಳವಣಿಗೆಗಳನ್ನು ನೋಡಿದ್ರೆ ಕೇಂದ್ರ ತನಿಖಾ ದಳಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಆಡಳಿತವಿರುವ ರಾಜ್ಯ ಸರ್ಕಾರಗಳನ್ನು ಉರುಳಿಸಲು ಕೇಂದ್ರ ಹುನ್ನಾರ ನಡೆಸುತ್ತಿದೆ ಎಂದು ಖರ್ಗೆ ಹೇಳಿದ್ದಾರೆ.

ರಾಜ್ಯದಲ್ಲಿ ಒಂದೆಡೆ ಬಿಜೆಪಿ ನಾಯಕರು ನವಂಬರ್ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಈ ಹಿಂದೆ ಹೇಳಿಕೆ ನೀಡಿದ್ದರು. ಇದೀಗ ಜಾತಿಗಣತಿ ವಿಚಾರದಲ್ಲಿ ಅಪಸ್ವರವೆದ್ದಿದೆ. ಇದರ ಜೊತೆಗೆ ಮುಖ್ಯಮಂತ್ರಿ ಕುರ್ಚಿಗಾಗಿ ಒಳಗೊಳಗೇ ಫೈಟ್ ನಡೆಯುತ್ತಿದೆ.

ಇದರ ಬೆನ್ನಲ್ಲೇ ರಾಜ್ಯ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಈ ಎಚ್ಚರಿಕೆ ನೀಡಿದ್ದಾರೆ. ಎಲ್ಲಾ ನಾಯಕರೂ ಒಗ್ಗಟ್ಟಿನಿಂದಿರಿ ಎಂದು ಕರೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ