ಸಿದ್ದರಾಮಯ್ಯ ಯಾಕಿಂಗಾಡ್ತಾರೋ ಗೊತ್ತಿಲ್ಲ ಅಂದ್ರು ಮಲ್ಲಿಕಾರ್ಜುನ ಖರ್ಗೆ

ಬುಧವಾರ, 27 ಜೂನ್ 2018 (11:15 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಗ್ಗೆ ಅಪಸ್ವರ ತೆಗೆಯುತ್ತಿರುವ ಸಿದ್ದರಾಮಯ್ಯ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
 

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಜೆಡಿಎಸ್ ಜತೆ ಸೇರಿ ಸರ್ಕಾರ ರಚನೆಗೆ ಮುಂದಾದೆವು. ಈ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂದು ಅವರು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಸರ್ಕಾರದ ವಿರುದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ ಬಗ್ಗೆ ಮಾತನಾಡಿದ ಅವರು ‘ಅವರು ಯಾಕೆ ಸರ್ಕಾರ ಐದು ವರ್ಷ ಪೂರೈಸಲ್ಲ ಅಂದಿದ್ದಾರೆ ಗೊತ್ತಿಲ್ಲ. ದೆಹಲಿಯಿಂದ ಬೆಂಗಳೂರಿಗೆ ಬಂದ ಮೇಲೆ ಅವರ ಜತೆ ಮಾತನಾಡುತ್ತೇನೆ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ