ಹೆಲಿಕಾಪ್ಟರ್ ಹತ್ತುವಾಗ ಜಾರಿ ಬಿದ್ದ ಮಮತಾ ಬ್ಯಾನರ್ಜಿಗೆ ಸಣ್ಣ ಪುಟ್ಟ ಗಾಯ

Sampriya

ಶನಿವಾರ, 27 ಏಪ್ರಿಲ್ 2024 (15:31 IST)
ಕೋಲ್ಕತಾ: ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ.

ಇಂದು ಸಿಎಂ ಮಮತಾ ಬ್ಯಾನರ್ಜಿ ಅವರು ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್​​​ನಲ್ಲಿ ಕುಳಿತುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ಅವರ ರಕ್ಷಣೆಗೆ ತಕ್ಷಣ ಸಿಬ್ಬಂದಿಗಳು ಧಾವಿಸಿದ್ದಾರೆ.

ಘಟನೆಯ ನಂತರ ಸಿಎಂ ಮಮತಾ ಬ್ಯಾನರ್ಜಿ ಅವರು ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ. ಅಸನ್ಸೋಲ್​ನಲ್ಲಿ ಟಿಎಂಸಿ ಅಭ್ಯರ್ಥಿ ಶತ್ರುಘ್ನ ಸಿನ್ಹಾ ಅವರ ಪರ ಮಮತಾ ಬ್ಯಾನರ್ಜಿ ಪ್ರಚಾರ ಮಾಡಲಿದ್ದಾರೆ.

ಇನ್ನೂ ಕಳೆದ ಆರು ವಾರಗಳಲ್ಲಿ ಮಮತಾ ಬ್ಯಾನರ್ಜಿ ಅವರು ಇದು ಎರಡನೇ ಬಾರಿ ಗಾಯಗೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ