ಶೌಚಾಲಯದಲ್ಲಿ ಕ್ಯಾಮರಾ ಅಳವಡಿಸಿ ಅಶ್ಲೀಲ ಚಿತ್ರ ತೆಗೆಯೋ ಪ್ರಯತ್ನ ಮಾಡುತ್ತಿದ್ದ ವಿಕೃತ ಕಾಮುಕನೊಬ್ಬನನ್ನು ಕುಮಟಾ ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯೊಬ್ಬರು ಈತನ ವಿರುದ್ಧ ನೀಡಿದ್ದ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ಕುಮಟಾ ಠಾಣಾ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿ ಮಾಧವ್ ಖಿಣಿ (28) ಕುಮಟಾ ಪುರಸಭೆಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದು, ಪುರಸಭೆ ವ್ಯಾಪ್ತಿಯ ಶೌಚಾಲಯದಲ್ಲಿ ಕ್ಯಾಮರಾ ಇರಿಸಿದ್ದ. ಅದನ್ನು ಗಮನಿಸಿದ ಮಹಿಳೆಯೋರ್ವಳು ಕುಮಟಾ ಠಾಣೆಯಲ್ಲಿ ದೂರು ನೀಡಿದ್ದಳು.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಮಾಧವ್ ಕಿಣಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.