ಮಹಿಳಾ ಲಾಯರ್ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ಅರೆಸ್ಟ್

ಸೋಮವಾರ, 16 ಮೇ 2022 (08:39 IST)
ಬಾಗಲಕೋಟೆ: ಮಹಿಳಾ ಲಾಯರ್ ಮೇಲೆ ಹಾಡಹಗಲೇ ಎಲ್ಲರೆದುರು ಥಳಿಸಿ ಹಲ್ಲೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳಾ ಲಾಯರ್ ಹಾಗೂ ಆಕೆಯ ಗಂಡನ ಮೇಲೆ ಹಲ್ಲೆ ನಡೆಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಜಮೀನು ವಿಚಾರವೊಂದರ ವಾಜ್ಯಕ್ಕೆ ಸಂಬಂಧಿಸಿದಂತೆ ಲಾಯರ್ ಜೊತೆ ವ್ಯಕ್ತಿಗೆ ವೈಮನಸ್ಯವಾಗಿತ್ತು. ಇದೇ ವಿಚಾರಕ್ಕೆ ಆಕ್ರೋಶಗೊಂಡು ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ