ಹುಸಿ ಬಾಂಬ್ ಕರೆ ಮಾಡಿದ ವ್ಯಕ್ತಿ ಬಂಧನ

ಶುಕ್ರವಾರ, 20 ಮೇ 2022 (21:05 IST)
ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾ ಣಕ್ಕೆ ಹುಸಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತನಿಂದ ಬೆದರಿಕೆ ಕರೆ ಮಾಡಲಾಗಿದೆ. ಬೆದರಿಕೆ ಕರೆಯಿಂದ ಏರ್​​ಪೋರ್ಟ್​​ನಲ್ಲಿ ಕೆಲಕಾಲ ಆತಂಕದ
ವಾತಾವರಣ ನಿರ್ಮಾಣವಾಗಿತ್ತು.. ಮುಂಜಾನೆ 03:30ರ ಸುಮಾರಿಗೆ ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದ ಎನ್ನಲಾಗಿದೆ..ಕೊನೆಗೆ ಬೆದರಿಕೆ ಕರೆಮಾಡಿದ್ದ ಪಶ್ಚಿಮಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ನಗರ ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ..ತನ್ನ ಅಕ್ಕನ ಗಂಡನ ಮೇಲೆ ಸೇಡು ತೀರಿಸಿಕೊಳ್ಳಲು ಸುಭಾಷ್ ಬೆದರಿಕೆ ಕರೆಮಾಡಿದ್ದಾನೆ..ಅಕ್ಕನ ಗಂಡನ ಹೆಸರು ಹೇಳಿದರೆ ಅವನನ್ನು ಬಂಧಿಸುತ್ತಾರೆ ಅಂದ್ಕೊಂಡು ಈ ಕೆಲಸ ಮಾಡಿದ್ದಾನೆ.. ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸದ್ಯ ಈಶಾನ್ಯ ವಿಭಾಗ ಪೊಲೀಸರಿಂದ ಆರೋಪಿಯ ವಿಚಾರಣೆ ಮಾಡಲಾಗ್ತಿದೆ.. ಬಳಿಕ ಆರೋಪಿಯನ್ನು ವಿಧಾನಸೌಧ ಪೊಲೀಸರ ವಶಕ್ಕೆ ಹಸ್ತಾಂತರಿಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ