ಇಎಂಐ ಕಟ್ಟಲು ಕಾಟ: ಯುವಕ ಆತ್ಮಹತ್ಯೆ
ಸಾಲ ಪಾವತಿಸಲು ಬ್ಯಾಂಕ್ ಸಿಬ್ಬಂದಿ ಒತ್ತಡ ಹೇರುತ್ತಿದ್ದರು. ಈ ವಿಚಾರವಾಗಿ ಗಂಡ-ಹೆಂಡತಿ ನಡುವೆ ಜಗಳವಾಗುತ್ತಿತ್ತು. ಇದರಿಂದ ಸಂತ್ರಸ್ತ ಮನನೊಂದಿದ್ದ.
ಪತ್ನಿ ತವರು ಮನೆಗೆ ಹೋಗಿದ್ದಾಗ ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾಲ ಪಾವತಿ ಮತ್ತು ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.