ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇವೆ. ಅದರಲ್ಲೂ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಗಳು ದಿನೇ ದಿನೇ ವರದಿಯಾಗುತ್ತಿದ್ದು ಕಳವಳಕ್ಕೆ ಕಾರಣವಾಗಿದೆ. 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಉತ್ತರಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದಿದೆ.
ಆರೋಪಿಯನ್ನು ಮೇಘರಾಜ್ ರಾಥೋಡ್ (29) ಎಂದು ಗುರುತಿಸಲಾಗಿದ್ದು ಪೀಡಿತಳ ಪೋಷಕರು ನೀಡಿರುವ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.