ಮಂಡ್ಯ: ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು, ಕೊಳೆತ ಸ್ಥಿತಿಯಲ್ಲಿ ಪತ್ತೆ

Sampriya

ಶನಿವಾರ, 7 ಡಿಸೆಂಬರ್ 2024 (19:14 IST)
Photo Courtesy X
ಮಂಡ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಲ್ಲಿಕ್ಯಾತನಹಳ್ಳಿಯ ಪಿಜಿ ಎಲ್‌ ರಸ್ತೆಯ ಬಳಿ ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

15ವರ್ಷದ ಹೆಣ್ಣಾನೆ ಮೃತಪಟ್ಟಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆನೆ ಸಾವನ್ನಪ್ಪಿರುವುದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆ ಅಧಿಕರಿಗಳಿಗೆ ತಿಳಿಸಿದ್ದಾರೆ.

ಗ್ರಾಮದ ಬಸಮ್ಮ ಮಹದೇವ್ ಅವರ ಜಮೀನಿನ ಮೇಲೆ ಹಾದು ಹೋಗಿದ್ದ ಕೆಪಿಟಿಸಿಎಲ್‌ನಿಂದ 66ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಇದನ್ನು ಸ್ಪರ್ಶಿಸಿ ಆನೆ ಸಾವನ್ನಪ್ಪಿದೆ. 

ಸ್ಥಳಕ್ಕೆ ಮಳವಳ್ಳಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. 7 ದಿನಗಳ ಹಿಂದೆಯೇ ಆನೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ