ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡಿರುವ ಮಾಕವಳ್ಳಿಯ ಕೋರಮಂಡಲ್ ಸಕ್ಕರೆ ಕಾರ್ಖಾನೆಯ ಕ್ರಮದಿಂದ ಮಂಡ್ಯ ಜಿಲ್ಲೆಯ ರೈತರು ಖುಷ್ ಆಗಿದ್ದಾರೆ.
ಕಾರ್ಖಾನೆಯಲ್ಲಿ ಹಬ್ಬದ ವಾತಾವರಣವಿತ್ತು. ವಿಶೇಷ ಪೂಜೆ ಹೋಮ-ಹವನ ನಡೆಸಿ ಕಬ್ಬು ಅರೆಯುವಿಕೆ ಕಾರ್ಯಕ್ಕೆ ಚಾಲನೆ ನೀಡಿದ್ರು ಕಾರ್ಖಾನೆಯ ಹಿರಿಯ ಉಪಾಧ್ಯಕ್ಷ ರವಿರೆಡ್ಡಿ.
ಮಂಡ್ಯ, ಕೆ.ಆರ್.ಪೇಟೆ, ಪಾಂಡವಪುರ ರೈತರ ಜೀವನಾಡಿಯಾಗಿ ಆತ್ಮೀಯ ಬಂಧುವಿನಂತೆ ಕೆಲಸ ಮಾಡುತ್ತಿರುವ ಮಾಕವಳ್ಳಿಯ ಕೋರಮಂಡಲ್ ಸಕ್ಕರೆ ಕಾರ್ಖಾನೆ ಯು ಪ್ರಸಕ್ತ ಹಂಗಾಮಿನ ಕಬ್ಬು ಅರೆಯುವ ಕಾರ್ಯಕ್ಕೆ ಮುಂದಾಗಿದೆ.
ಕಳೆದ ಸಾಲಿನಲ್ಲಿ ಏಳೂವರೆ ಲಕ್ಷ ಟನ್ ಕಬ್ಬು ಅರೆದು ಮಂಡ್ಯ ಜಿಲ್ಲೆಯಲ್ಲಿ ದಾಖಲೆ ನಿರ್ಮಾಣ ಮಾಡಿತ್ತು ಕೋರಮಂಡಲ್ ಸಕ್ಕರೆ ಕಾರ್ಖಾನೆ. ಪ್ರಸಕ್ತ ಸಾಲಿನಲ್ಲಿ ಎಂಟು ಲಕ್ಷ ಟನ್ ಕಬ್ಬು ಅರೆಯುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ ರವಿರೆಡ್ಡಿ.