ಮಂಡ್ಯದ ಹುತಾತ್ಮ ಯೋಧ ಗುರು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ಸವಲತ್ತು ಒದಗಿಸುವ ಭರವಸೆ ನೀಡಿದ ಸಿಎಂ

ಶುಕ್ರವಾರ, 15 ಫೆಬ್ರವರಿ 2019 (13:40 IST)
ಮಂಡ್ಯ : ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರನ ಆತ್ಮಾಹುತಿ ದಾಳಿಯಲ್ಲಿ ಮಂಡ್ಯದ ಯೋಧ ಗುರು ಹುತಾತ್ಮರಾಗಿದ್ದ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಹುತಾತ್ಮ ಯೋಧನ ಸೋದರನಿಗೆ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.


ಅವಂತಿಪುರ್ -ಪುಲ್ವಾನ ಮಾರ್ಗ ಮಧ್ಯದಲ್ಲಿ ಸಾಗುತ್ತಿದ್ದ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ ಘಟನೆಯಲ್ಲಿ 44ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಇವರಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗುಡಿಕೆರೆ ಕಾಲೋನಿಯ ಹೆಚ್.ಗುರು ಎಂಬುವವರು ಕೂಡ ಒಬ್ಬರಾಗಿದ್ದಾರೆ.


ಈ ಹಿನ್ನಲೆಯಲ್ಲಿ ಮನೆ ಮಗನನ್ನು ಕಳೆದುಕೊಂಡು ದುಃಖದಲ್ಲಿರುವ ಹುತಾತ್ಮ ಯೋಧನ ಕುಟುಂಬಕ್ಕೆ ಕರೆ ಮಾಡಿ ಸಾಂತ್ವಾನ ಹೇಳಿದ ಸಿಎಂ ಕುಮಾರಸ್ವಾಮಿ ಹುತಾತ್ಮ ಯೋಧನ ಪತ್ನಿಗೆ ಸರ್ಕಾರಿ ಕೆಲಸ ಕೊಡುವುದಾಗಿ ಭರವಸೆ ನೀಡಿದ್ದಾರೆ. ಹಾಗೇ ರಾಜ್ಯ ಸರ್ಕಾರದಿಂಧ ಎಲ್ಲ ಸವಲತ್ತು ಒದಗಿಸುವ ಭರವಸೆ ಕೂಡ ನೀಡಿದ್ದಾರೆ ಎಂದು ಸಚಿವ ಪುಟ್ಟರಾಜು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ