ಬೇರೆ ಕುಟುಂಬಗಳಿಗೆ ಮದುವೆ ನಿಶ್ಚಯ: ಅವಳಿ ಸೋದರಿಯರು ದುರಂತ ಅಂತ್ಯ
ಮದುವೆ ಆಗಿ ಬಿಟ್ಟರೆ ಬೇರೆ ಬೇರೆ ಆಗ್ತೀವಿ ಅಂತ ನೊಂದ ಅವಳಿ ಸಹೋದರಿಯರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಅವಳಿ ಸಹೋದರಿಯರು ಚಿಕ್ಕಂದಿನಿಂದ ಬಹಳ ಅನ್ಯೋನ್ಯತೆಯಿಂದಿದ್ದು, ಇಬ್ಬರನ್ನೂ ಬೇರೆ ಬೇರೆ ಮನೆಗೆ ಮದುವೆ ಮಾಡಿಕೊಡಲು ಪೋಷಕರು ಬಯಸಿದ್ದರು. ಬೇರೆ ಬೇರೆ ಮನೆಗೆ ಮದುವೆಯಾದರೆ ತಮ್ಮ ಬಾಂಧವ್ಯ ಕೊನೆಯಾಗುತ್ತದೆ ಎಂದು ಆತಂಕಗೊಂಡ ಸೋದರಿಯರು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.