ಮಂಗಳೂರು: ಮಂಗಳೂರಿನಲ್ಲಿ ಡ್ರಗ್ಸ್ ಜಾಲವನ್ನು ಭೇದಿಸಿರುವ ಪೊಲೀಸರು ಬೀದರ್ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ವೈದ್ಯನಾಗಿದ್ದ ಎಂಬ ಅಘಾತಕಾರಿ ಮಾಹಿತಿ ಈಗ ಹೊರಬಂದಿದೆ. ವೈದ್ಯರ ಬಂಧನದ ಬೆನ್ನಲ್ಲೇ, ಜಿಲ್ಲೆಯಲ್ಲಿ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ಅನೇಕ ಅಚ್ಚರಿ ಹಾಗೂ ಆತಂಕಕಾರಿ ಮಾಹಿತಿಗಳು ಬಹಿರಂಗವಾಗಿದೆ.
ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿರುವ ಪ್ರಜ್ವಲ್ ಪೀಣ್ಯಾಸ್ ಬಂಧಿತ ವೈದ್ಯನಾಗಿದ್ದಾನೆ. ಪ್ರಜ್ವಲ್ ಪೀಣ್ಯಾಸ್ ಹಾಗೂ ಇತರ ಪೆಡ್ಲರ್ಗಳು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎಂಬ ಅಘಾತಕಾರಿ ಅಂಶ ಈ ಕಾರ್ಯಾಚರಣೆಯ ಮೂಲಕ ಹೊರಬಿದ್ದಿದೆ.