ಶ್ರೀರಾಮನಿಗೆ ಅವಮಾನ ಮಾಡಿದ್ದ ಶಿಕ್ಷಕಿ ಅಮಾನತು

Krishnaveni K

ಸೋಮವಾರ, 12 ಫೆಬ್ರವರಿ 2024 (17:13 IST)
ಮಂಗಳೂರು: ಪ್ರಭು ಶ್ರೀರಾಮಚಂದ್ರನಿಗೆ ಅವಮಾನ ಮಾಡಿದ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಅಮಾನತು ಮಾಡಿರುವುದಾಗಿ ಶಾಲಾ ಆಡಳಿತ ಮಂಡಳಿ ತಿಳಿಸಿದೆ.

ಶ್ರೀರಾಮನಿಗೆ ಅವಹೇಳನ ಮಾಡಿದ್ದನ್ನು ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಮುತ್ತಿಗೆಗೆ ಯತ್ನಿಸುವ ವೇಳೆ ಮಧ್ಯಪ್ರವೇಶಿಸಿದ ಆಡಳಿತ ಸಿಬ್ಬಂದಿ ಶಿಕ್ಷಕಿಯನ್ನು ಅಮಾನತು ಮಾಡಿರುವುದಾಗಿ ಹೇಳಿದ್ದಾರೆ.

ಶಿಕ್ಷಕಿ ವಿರುದ್ಧ ಹೆಚ್ಚಿದ ಆಕ್ರೋಶ
ಶಿಕ್ಷಕಿ ಪ್ರಭಾ ವಿರುದ್ಧ ಧರ್ಮ ನಿಂದನೆ ಆರೋಪ ಕೇಳಿಬಂದಿದ್ದು, ಸ್ಥಳೀಯರಿಂದ ಶಾಲೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶಾಲೆ ವಿರುದ್ಧ ಹಿಂದೂ ಸಂಘಟನೆಗಳು ಭಾರೀ ಪ್ರತಿಭಟನೆಗೆ ಮುಂದಾದಾಗ ಪೊಲೀರು ತಡೆದರು. ಈ ವೇಳೆ ಸ್ಥಳೀಯರು ಶಿಕ್ಷಕಿ ಮತ್ತು ಶಾಲಾ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಶಿಕ್ಷಕಿಯನ್ನು ಅಮಾನತು ಮಾಡಿರುವುದಾಗಿ ಅಧಿಕೃತ ಪತ್ರ ತೋರಿಸಲಾಯಿತು.

ಪ್ರಕರಣದ ಹಿನ್ನಲೆ
ಮಂಗಳೂರಿನ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ ಅಯೋಧ್ಯೆ ರಾಮಮಂದಿರ ಮತ್ತು ಪ್ರಭು ರಾಮಚಂದ್ರನ ಬಗ್ಗೆ ವಿದ್ಯಾರ್ಥಿಗಳ ಮುಂದೆ ಅವಹೇಳನಕಾರಿಯಾಗಿ ಮಾತನಾಡಿದ್ದರು.ಶಿಕ್ಷಕಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿದ್ದಾರೆ. ಇದನ್ನು ವಿದ್ಯಾರ್ಥಿಗಳು ಪೋಷಕರಿಗೆ ಹೇಳಿದ್ದರು. ಈ ಹಿನ್ನಲೆಯಲ್ಲಿ ಹಿಂದೂ ಸಂಘಟನೆಗಳ ಜೊತೆಗೂಡಿ ಪೋಷಕರು ಶಾಲೆ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದರು.  ಅಲ್ಲದೆ ಶಿಕ್ಷಕಿ ವಿರುದ್ಧ ಪೊಲೀಸರಿಗೂ ದೂರು ನೀಡಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ