ಮಂಜೇಶ್ವರ ಶಾಸಕ ಪಿ.ಬಿ.ಅಬ್ದುಲ್ ರಝಾಕ್ ಇನ್ನಿಲ್ಲ
ಮಂಜೇಶ್ವರ ಶಾಸಕ ಪಿ.ಬಿ.ಅಬ್ದುಲ್ ರಝಾಕ್ ಅವರು ನಿಧನರಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಶಾಸಕ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಎರಡು ಬಾರಿ ಮಂಜೇಶ್ವರ ಕ್ಷೇತ್ರದಿಂದ ಕೇರಳ ವಿಧಾನಸಭೆಗೆ ಪಿ.ಬಿ.ಅಬ್ದುಲ್ ರಝಾಕ್ ಆಯ್ಕೆಯಾಗಿದ್ದರು.
2 ಬಾರಿ ಮುಸ್ಲಿಂ ಲೀಗ್ ಪಕ್ಷದಿಂದ ಸ್ಪರ್ಧಿಸಿ ಜಯಿಸಿದ್ದರು.
2016 ರಲ್ಲಿ ನಡೆದ ಚುನಾವಣೆಯಲ್ಲಿ ಕೇವಲ 89 ಮತಗಳಿಗೆ ಬಿಜೆಪಿಯ ಕೆ. ಸುರೇಂದ್ರನ್ರನ್ನು ಸೋಲಿಸಿ ಗೆದ್ದಿದ್ದರು.
ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದರು.