ಮಹದೇವಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಅಬ್ಬರ ಪ್ರಚಾರ
ಮಹದೇವಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಅಬ್ಬರದ ಪ್ರಚಾರ ನಡೆಸಿದ್ದಾರೆ.ಮಹದೇವಪುರ ಕ್ಷೇತ್ರದ ಗ್ರಾಮಾಂತರ ಭಾಗದಲ್ಲಿ ಉರಿ ಬಿಸಿಲನ್ನ ಲೆಕ್ಕಿಸದೆ ಪ್ರಚಾರ ನಡೆಸ್ತಿದ್ದು,ಬೈರತಿ, ಬೈರತಿ ಬಂಡೆ, ಕಣ್ಣೂರು, ಬಂಡೆ ಹೊಸೂರು, ಮಿಟ್ಟಿಗಾನಹಳ್ಳಿ ಸೇರಿದಂತೆ ಹಲವೆಡೆ ತೆರೆದ ವಾಹನದಲ್ಲಿ ಮತಯಾಚನೆ ಮಾಡಿದ್ದಾರೆ.ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿರವರಿಗೆ ಸ್ಥಳೀಯ ಮುಖಂಡರಾದ ಅಶೋಕ್, ದನಂಜಯ್ ಮುಂತಾದವರು ಸಾಥ್ ನೀಡಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಹಾಗೂ ಶಾಸಕ ಅರವಿಂದ ಲಿಂಬಾವಳಿ ಅವರ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀ ರಕ್ಷೆ ಎಂದು ಅಭ್ಯರ್ಥಿ ಹೇಳಿದ್ರು.