ಬೆಂಗಳೂರು : ಸಿಲಿಕಾನ್ ಸಿಟಿಯ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಇದೀಗ ಅರೆಸ್ಟ್ ಆಗಿದ್ದಾರೆ.
ಜಮೀನು ವ್ಯಾಜ್ಯ ಇತ್ಯರ್ಥಪಡಿಸಲು 5 ಲಕ್ಷ ಪಡೆದ ಪ್ರಕರಣದಲ್ಲಿ ಸದ್ಯ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಎಂಡಿ ಆಗಿರುವ ಮಂಜುನಾಥ್ ಅರೆಸ್ಟ್ ಆಗಿದ್ದಾರೆ.
ಎಸಿಬಿ ಅಧಿಕಾರಿಗಳು ಮಂಜುನಾಥ್ರನ್ನು ಇಂದು ವಿಚಾರಣೆಗೆ ಕರೆದು ಸಾಕ್ಷ್ಯಾಧಾರ ಪಕ್ಕಾ ಆದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಮೂಲತಃ ರಾಜ್ಯ ಲೆಕ್ಕ ಪತ್ರ ಇಲಾಖೆ ಹಿರಿಯ ಅಧಿಕಾರಿಯಾಗಿದ್ದ ಮಂಜುನಾಥ್ ಅವರು ನಾನ್ ಕೆಎಎಸ್ ವಿಭಾಗದಲ್ಲಿ ಐಎಎಸ್ ಪದೋನ್ನತಿ ಪಡೆದವರಾಗಿದ್ದಾರೆ.
ಚಿಕ್ಕಬಳ್ಳಾಪುರ ಸಿಇಒ ಆಗಿದ್ದರು ನಂತರ ಕೋಲಾರ ಡಿಸಿ ಆಗಿದ್ದರು. ಬಳಿಕ ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದರು. ಕಳೆದ 1 ವರ್ಷದಿಂದ ಬೆಂಗಳೂರು ಡಿಸಿಯಾಗಿದ್ದರು.
ಭ್ರಷ್ಟಾಚಾರ ಆರೋಪ ಕೇಳಿಬಂದ ಬೆನ್ನಲ್ಲೇ ಬೆಂಗಳೂರು ಡಿಸಿಯಿಂದ ಕಳೆದ ವಾರವಷ್ಟೇ ಇಂಟಿಗ್ರೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಸ್ಕೀಮ್ ಎಂಡಿಯಾಗಿ ಮಂಜುನಾಥ್ನನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ಇದೀಗ ವಿಚಾರಣೆಗೆ ಕರೆದು ಮಂಜುನಾಥ್ ರನ್ನ ಕರೆದು ಎಸಿಬಿ ಅರೆಸ್ಟ್ ಮಾಡಿದೆ.