೨೮ ನೇ ಜನರಲ್ ಆಗಿರುವ ಮನೋಜ್ ಮುಕುಂದ ನರವಾನೆ ಅವರು ಜನವರಿ 1 ರಂದು ಅಧಿಕಾರ ವಹಿಸಿಕೊಂಡು... 'ದೊಡ್ಡ ಜವಾಬ್ದಾರಿ ನೀಡಿರುವುದು ದೇಶ ನನಗೆ ನೀಡಿರುವ ಗೌರವ ಎಂದುಕೊಳ್ಳುತ್ತೇನೆ. ಕಠಿಣ ಸನ್ನಿವೇಶದಲ್ಲಿ ಕಾರ್ಯನಿರ್ವಹಿಸುವ ನಮ್ಮ ಸೈನಿಕರ ದಕ್ಷತೆಯನ್ನು ಇನ್ನಷ್ಟು ಹೆಚ್ಚಿಸುವಲ್ಲಿ ನಾನು ಹೆಚ್ಚು ಗಮನ ಹರಿಸುತ್ತೇನೆ. ಈಗ ಅದಕ್ಕೆ ಸಮಯ ಕೂಡಿ ಬಂದಿದೆ ಎಂದು' ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.