ಐಎಂಎ ಕಂಪನಿ ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಮನ್ಸೂರ್ ಖಾನ್ ಅರೆಸ್ಟ್

ಶುಕ್ರವಾರ, 19 ಜುಲೈ 2019 (10:26 IST)
ಬೆಂಗಳೂರು : ಐಎಂಎ ಕಂಪನಿ ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಮನ್ಸೂರ್ ಖಾನ್ ನನ್ನು ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ನಿನ್ನೆ ತಡರಾತ್ರಿ ದುಬೈನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮನ್ಸೂರ್​ ಖಾನ್​ನನ್ನು ಇಮಿಗ್ರೇಷನ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ, ಇಡಿ ವಶಕ್ಕೆ ಮನ್ಸೂರ್​ ಖಾನ್ ​ನನ್ನು ನೀಡಲಾಗಿದೆ.


ಇಂದು ಸಂಜೆ ವೇಳೆಗೆ ಮನ್ಸೂರ್ ಖಾನ್​ನನ್ನು ಬೆಂಗಳೂರು ಇಡಿ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿ ವಿಚಾರಣೆ ನಡೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದುವರೆಗೂ ಮನ್ಸೂರ್ ಖಾನ್ ಮತ್ತು ಐಎಂಎ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ 40 ಸಾವಿರಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ