ತಿರುಪತಿ ಲಡ್ಡು ವಿವಾದದ ಬಳಿಕ ಹಿಂದೂ ದೇವಾಲಯಗಳ ಬಗ್ಗೆ ಸ್ವಾಮೀಜಿಗಳಿಂದ ಬೇಡಿಕೆ: ಇದಕ್ಕೆ ಹಿಂದೂಗಳಿಂದಲೂ ಸಹಮತ

Krishnaveni K

ಸೋಮವಾರ, 23 ಸೆಪ್ಟಂಬರ್ 2024 (11:47 IST)
Photo Credit: X
ಬೆಂಗಳೂರು: ತಿರುಪತಿ ಲಡ್ಡು ವಿವಾದದ ಬಳಿಕ ಹಿಂದೂ ದೇವಾಲಯಗಳ ಬಗ್ಗೆ ಸ್ವಾಮೀಜಿಗಳಿಂದ ಬೇಡಿಕೆ ಶುರುವಾಗಿದ್ದು, ಇದಕ್ಕೆ ಸೋಷಿಯಲ್ ಮೀಡಿಯಾಗಳ ಮೂಲಕ ಹಿಂದೂಗಳಿಗೆ ಸಹಮತ ಸಿಗುತ್ತಿದೆ.

ಇತ್ತೀಚೆಗೆ ತಿರುಪತಿಯಲ್ಲಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಿರುವ ವಿಚಾರ ಹಿಂದೂಗಳನ್ನು ಕೆರಳಿಸಿದೆ. ಇದರ ಜೊತೆಗೆ ಹಿಂದೂ ದೇವಾಲಯಗಳ ಆಡಳಿತದಲ್ಲಿಹಿಂದೂಗಳೇ ಇರಬೇಕು ಎಂಬ ಕೂಗು ಕೇಳಿಬರುತ್ತಿದೆ. ಇದೀಗ ತಿರುಪತಿ ಲಡ್ಡು ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಪೇಜಾವರ ಶ್ರೀಗಳು ಮತ್ತು ಮಂತ್ರಾಲಯ ಶ್ರೀಗಳು ಈ ಕೂಗಿಗೆ ಧ್ವನಿಗೂಡಿಸಿದ್ದಾರೆ.

ತಿರುಪತಿ ಲಡ್ಡು ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಪೇಜಾವರ ಮಠದ ಶ್ರೀಗಳು, ಧಾರ್ಮಿಕ ಶ್ರದ್ಧಾ ಕೇಂದ್ರಗಳು ಸರ್ಕಾರದ ಅಧೀನದಲ್ಲಿರಬಾರದು. ಅದು ಹಿಂದೂ ಸಂಸ್ಥೆಗಳ ಕೈಯಲ್ಲಿರಬೇಕು. ದೇವಾಲಯಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದರ ಬೆನ್ನಲ್ಲೇ ಮಂತ್ರಾಲಯ ಶ್ರೀಗಳೂ ಇದಕ್ಕೆ ಧ್ವನಿಗೂಡಿಸಿದ್ದಾರೆ. ಮಠಮಾನ್ಯಗಳು, ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಮುಜರಾಯಿ ಇಲಾಖೆಯಿಂದ ಮುಕ್ತಿಗೊಳಿಸಬೇಕು ಎಂದಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಆಯಾ ದೇವಸ್ಥಾನ, ಮಠಗಳ ಆಯಾ ಶಿಷ್ಯರ, ಸಮುದಾಯ ಮುಖಂಡರ ನೇತೃತ್ವದಲ್ಲಿ ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿದ್ದವು. ಆದರೆ ಈಗ ಎಲ್ಲವೂ ಸರ್ಕಾರದ ವಶದಲ್ಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ