ಏಕಾಏಕಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಹಲವು ಸಮುದಾಯದ ಸ್ವಾಮೀಜಿಗಳು

Sampriya

ಭಾನುವಾರ, 25 ಆಗಸ್ಟ್ 2024 (16:39 IST)
Photo Courtesy X
ಬೆಂಗಳೂರು: ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು.

ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರದ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸಿದ ಸ್ವಾಮೀಜಿಗಳು ಈ ಷಡ್ಯಂತ್ರದ ವಿರುದ್ಧ ಒಕ್ಕೋರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದರು.

ನಿಯೋಗದಲ್ಲಿದ್ದ ಸ್ವಾಮೀಜಿಗಳು...

ಕನಕ ಪೀಠ ಕಾಗಿನೆಲೆ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿ,  ಶ್ರೀ ಜಗದ್ಗುರು ಕುಂಚಿಟಿಗ
ಮಾಸಂಸ್ಥಾನ ಮಠ ಹೊಸದುರ್ಗ
 ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿ, ಚಿತ್ರದುರ್ಗದ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು, ಮಾದರ ಚನ್ನಯ ಗುರುಪೀಠದ ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು, ಭಗಿರಥ ಪೀಠ ಮಧುರೆ ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಕನಕ ಗುರುಪೀಠ ಹೊಸದುರ್ಗ ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು,  ಶಿವಮೊಗ್ಗ ನಾರಾಯಣ ಗುರುಪೀಠ ಶ್ರೀ ರೇಣುಕಾನಂದ ಸ್ವಾಮಿಗಳು, ಚಿತ್ರದುರ್ಗ ಗುರುಪೀಠದ ಮಡಿವಾಳ ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು, ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು, ವಿಜಯನಗರ ಸರೂರು ಶ್ರೀ ಶಾಂತಮ್ಮಯ್ಯ ಸ್ವಾಮೀಜಿಗಳು ನಿಯೋಗದಲ್ಲಿ ಇದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ