ಮತ್ತೆ ಸಿಎಂ ಸಿದ್ದರಾಮಯ್ಯಗೆ ಆಪ್ತನಾಗ್ತಾನಾ ಮರಿಗೌಡ?

ಗುರುವಾರ, 6 ಅಕ್ಟೋಬರ್ 2016 (12:10 IST)
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿ ಜೈಲು ಪಾಲಾಗಿದ್ದ ಸಿಎಂ ಆಪ್ತ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ಮರಿಗೌಡ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆಪ್ತನಾಗಲು ಯತ್ನಿಸುತ್ತಿದ್ದಾನೆ.
 
ಮೈಸೂರಿನ ಮಂಡಕಳ್ಳಿ ಏರ್‌ಪೋರ್ಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸ್ವಾಗತಿಸಿ ಬರಮಾಡಿಕೊಂಡ ಕೆ.ಮರಿಗೌಡ, ಮತ್ತೇ ಸಿಎಂ ಜೊತೆ ಕಾಣಿಸಿಕೊಂಡಿದ್ದಾನೆ.
 
ತಹಶೀಲ್ದಾರ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಕೆ.ಮರಿಗೌಡ ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದರು. ಈ ಕುರಿತು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಮರಿಗೌಡ ತಲೆ ಮರೆಸಿಕೊಂಡಿದ್ದ.
 
ಅಗಸ್ಟ್ 6 ರಂದು ಕೆ.ಮರಿಗೌಡ ನಜರ್‌ಬಾದ್ ಪೊಲೀಸ್ ಠಾಣೆಗೆ ಶರಣಾಗಿದ್ದು, ಜಾಮೀನು ನೀಡುವಂತೆ ಕೋರಿ ಕೋರ್ಟ್ ಮೊರೆ ಹೋಗಿದ್ದರು. ಜೈಲುವಾಸ ಅನುಭವಿಸಿದ ನಂತರ ಬಿಡುಗಡೆ ಹೊಂದಿದ್ದರು.
 
ಕಾಂಗ3ೆಸ್ ಪಕ್ಷದ ರಾಜ್ಯ ಘಟಕ ಮರಿಗೌಡನನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಿದ್ದರೂ ಇದೀಗ ಸಿಎಂ ಸಿದ್ದರಾಮಯ್ಯನವರ ಕೃಪಕಟಾಕ್ಷದಿಂದ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಾರೆಯೇ ಎನ್ನುವುದನ್ನು ಕಾದುನೋಡಬೇಕಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ